ಕರ್ನಾಟಕ

ಸರ್ಕಾರಿ ಉದ್ಯೋಗದಲ್ಲಿ ಮಹಿಳಾ ಮೀಸಲಾತಿ ಹೆಚ್ಚಳ

Pinterest LinkedIn Tumblr

reservಬೆಂಗಳೂರು: ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರ ಮೀಸಲಾತಿ ಪ್ರಮಾಣವನ್ನು ಶೇ.30ರಿಂದ 33ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಮಹಿಳೆಯರ ಮೀಸಲಾತಿಯನ್ನು ಶೇ.30ರಿಂದ 33ಕ್ಕೆ ಏರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಡಿದ್ದ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಉದ್ಯೋಗಗಳಲ್ಲಿ ಇದುವರೆಗೂ ಮಹಿಳೆಯರಿಗೆ ಶೇ.30ರಷ್ಟು ಮೀಸಲಾತಿ ಸೌಲಭ್ಯ ಒದಗಿಸಲಾಗುತ್ತಿತ್ತು. ಇದೀಗ ಮಹಿಳಾ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಇಂದು ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.

Write A Comment