ಕರ್ನಾಟಕ

ಸ್ವಾತಂತ್ರ್ಯ ಸಂಗ್ರಾಮದಲ್ಲಿ RSS, BJP ಬ್ರಿಟಿಷರ ಜೊತೆಗಿದ್ರು; ರಮ್ಯಾ

Pinterest LinkedIn Tumblr

ramya-birthday-ಮಂಡ್ಯ: ಇತ್ತೀಚೆಗಷ್ಟೇ ಪಾಕಿಸ್ತಾನ ನರಕವಲ್ಲ, ಮಂಗಳೂರು ನರಕ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಒಳಗಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಆರ್ ಎಸ್ ಎಸ್ ಪಾತ್ರ ಏನೂ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.

ಸ್ವಾತಂತ್ರ್ಯ ಹೋರಾಟ ಸಂಗ್ರಾಮದ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿಯವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು ಎಂದು ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ ಪಕ್ಷ ಕಾರಣ. ಬಿಜೆಪಿ, ಆರ್ ಎಸ್ ಎಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಆರೋಪಿಸಿದರು.

ಮಾತಾಡುವ ಮುನ್ನ ಇತಿಹಾಸ ತಿಳಿದುಕೊಳ್ಳಲಿ; ಸಂಸದ ಪ್ರತಾಪ್ ಸಿಂಹ
ರಾಜಕೀಯ ಮತ್ತು ಸಿನಿಮಾರಂಗದಲ್ಲಿ ಚಲಾವಣೆ ಕಳೆದುಕೊಂಡಿರುವ ರಮ್ಯಾ ಪೆದ್ದು, ಪೆದ್ದಾಗಿ ಹೇಳಿಕೆ ಕೊಡುವ ಮುನ್ನ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಲಿ ಎಂದು ಮೈಸೂರು, ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ರಮ್ಯಾ ಕರ್ನಾಟಕದ ರಾಹುಲ್ ಗಾಂಧಿ ಆಗಲು ಹೊರಟಿದ್ದಾರೆ. ಮೊದಲ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಕೊಡುಗೆ ಏನು? ಬಿಜೆಪಿ, ಆರ್ ಎಸ್ ಎಸ್ ಕೊಡುಗೆ ಬಗ್ಗೆ ಓದಿ ತಿಳಿದುಕೊಳ್ಳಲಿ. ಸಿನಿಮಾದಲ್ಲಿ ಸ್ಕ್ರಿಪ್ಟ್ ಇರುತ್ತೆ, ಆದರೆ ರಾಜಕೀಯದಲ್ಲಿ ಸ್ಕ್ರಿಪ್ಟ್ ಇರಲ್ಲ ಎಂದು ಟಾಂಗ್ ನೀಡಿದ್ದಾರೆ.

-ಉದಯವಾಣಿ

Comments are closed.