ಕರ್ನಾಟಕ

ಸಿಯಾಚಿನ್ ನಲ್ಲಿ ಹಿಮಪಾತ: 6 ದಿನಗಳ ಬಳಿಕ ಜೀವಂತವಾಗಿ ಪತ್ತೆಯಾದ ಕರ್ನಾಟಕದ ಯೋಧ ! ಇಲ್ಲಿದೆ ವೀಡಿಯೋ …

Pinterest LinkedIn Tumblr

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಕಣಿವೆಯಲ್ಲಿ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ ಜೀವಂತವಾಗಿ ಪತ್ತೆಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಫೆಬ್ರವರಿ 3ರಂದು ಸಂಭವಿಸಿದ ಹಿಮಪಾತದಲ್ಲಿ ಭಾರತದ 10 ಯೋಧರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಆದರೆ, ಸಿಯಾಚಿನ್ ನಲ್ಲಿ ಕರ್ನಾಟಕದ ಯೋಧ ಹನುಮಂತಪ್ಪ ಬದುಕುಳಿದಿದ್ದಾರೆ.

6 ದಿನಗಳ ಬಳಿಕ ಅಸ್ವಸ್ಥ ಸ್ಥಿತಿಯಲ್ಲಿ ಹನುಮಂತಪ್ಪ ಕೊಪ್ಪದ ಪತ್ತೆಯಾಗಿದ್ದಾರೆ. ಈ ಬಗ್ಗೆ ಸೇನೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಅಸ್ವಸ್ಥ ಸೇನಾ ಯೋಧನಿಗೆ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹನುಮಂತಪ್ಪ ಕೊಪ್ಪದ ಕರ್ನಾಟಕದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರಿನ ನಿವಾಸಿ.

Write A Comment