ಕರಾವಳಿ

ದೇರಳಕಟ್ಟೆ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Pinterest LinkedIn Tumblr

deralakatte_accused_1

ಮಂಗಳೂರು,ನ.15: ದೇರಳಕಟ್ಟೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಸಫ್ವಾನ್ ಹುಸೇನ್, 2ನೇ ಆರೋಪಿ ಶಮೀರ್ ಹಾಗೂ 5ನೇ ಆರೋಪಿ ನವಾಜ್ ಯಾನೆ ಪ್ರವೀಣ್ ಜಾಮೀನು ನೀಡುವಂತೆ ನಗರದ 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲಿಸಿ ತೀರ್ಪು ನೀಡಿದ್ದ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಇದೇ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಇಕ್ಬಾಲ್ ಹ್ಯಾರಿಸ್ ಎಂಬಾತ ಜಾಮೀನು ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ ಆತನಿಗೂ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು.

Write A Comment