ಬಂಟ್ವಾಳ, ಕರಾವಳಿ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಮುಂಬೈಗೆ ತೆರಳಿ ಕೇವಲ ಪತ್ರಕರ್ತನಾಗಿ ಗುರುತಿಸಿಕೊಳ್ಳದೆ ಸಾಮಾಜಿಕ, ಸಾಂಕವಾಗಿ ತೊಡಗಿಸಿಕೊಂಡು ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಂಡ ರೋನ್ಸ್ ಬಂಟ್ವಾಳ ಕರ್ನಾಟಕ-ಮಹಾರಾಷ್ಟ್ರಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿದ್ದಾರೆ ಎಂದು ಮಂಗಳೂರು ಆಕಾಶವಾಣಿಯ ಸಹಾಯಕ ನಿಲಯ ನಿರ್ದೇಶಕ ಡಾ.ವಸಂತಕುಮಾರ್ ಪೆರ್ಲ ಹೇಳಿದ್ದಾರೆ.
ಅವರು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡಮಿ ಪ್ರಶಸ್ತಿ ಪುರಸ್ಕೃತ ರೋನ್ಸ್ ಬಂಟ್ವಾಳರವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ರೋನ್ಸ್ ಬಂಟ್ವಾಳ, ತನ್ನ ವೃತ್ತಿ ಬದುಕಿನ ಅನುಭವಗಳನ್ನು ತೆರೆದಿಟ್ಟರು. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಯಾನಂದ ಪೆರಾಜೆ ಅಭಿನಂದನಾ ಭಾಷಣಗೈದರು.
ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೌನೇಶ ವಿಶ್ವಕರ್ಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸೂರ್ಯನಾರಾಯಣ ಪೂವಳ ಸ್ವಾಗತಿಸಿದರು. ಕಾರ್ಯದರ್ಶಿ ರತ್ನದೇವ್ ಪೂಂಜಾಲಕಟ್ಟೆ ವಂದಿಸಿದರು. ಕೋಶಾಕಾರಿ ಸಂದೀಪ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.