ಮಂಗಳೂರು,ಮೇ.22 : ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಫೆಡರೇಶನ್ ಸಹಯೋಗದಲ್ಲಿ ಮಂಗಳೂರಿನ ಬೀಚ್ನಲ್ಲಿ ಮೇ 29, 30, 31 ರಂದು ಅಯೋಜಿಸಲಾಗಿದ್ದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ಶಿಪ್ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಇದರಿಂದ ಸರ್ಫಿಂಗ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಇಚ್ಚಿಸಿದಂತಹ ಸಾಹಸಪ್ರಿಯರಿಗೆ ನಿರಾಶೆ ಉಂಟಾಗಿದೆ.
ಇನ್ನು ಕೆಲವೇ ದಿನಗಳಲ್ಲಿ ಜಿಲ್ಲೆಯಾದ್ಯಂತ ಸ್ಥಳೀಯ ಪಂಚಾಯತ್ಗಳ ಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸುವುದು ಕಷ್ಟ ಸಾಧ್ಯವಾದ್ದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ 22 ರಿಂದ 25 ರತನಕ ವಿಜೃಂಭಣೆಯಿಂದ ನಡೆಸಲಾಗುವುದು. ಈ ಬಗ್ಗೆ ಸಾರ್ವಜನಿಕರ ಸಹಕಾರ ಕೋರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.