ಕರ್ನಾಟಕ

ರೇಣುಕಾಚಾರ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ; ನಗದು, ಚಿನ್ನಾಭರಣ ವಶ

Pinterest LinkedIn Tumblr

renukacharya11

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ಗುರುವಾರ ಬೆಳಗ್ಗೆ ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದೆ.

ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸುತ್ತಿದೆ. ರೇಣುಕಾ ನಿವಾಸದಲ್ಲಿ 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ, ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಲೋಕಾಯುಕ್ತ ಮೂಲಗಳು ತಿಳಿಸಿವೆ.

ರೇಣುಕಾಚಾರ್ಯ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮೇ 4ರಂದು ಆದೇಶ ನೀಡಿತ್ತು. ಇತ್ತೀಚೆಗಷ್ಟೇ ರೇಣುಕಾಚಾರ್ಯ ವಿರುದ್ಧ ಭ್ರಷ್ಟಾಚಾರ ವಿರೋಧಿ ವೇದಿಕೆಯ ಗುರುಪಾದಯ್ಯ ಲೋಕಾಯುಕ್ತ ಕೋರ್ಟ್ ಗೆ ದೂರು ಸಲ್ಲಿಸಿದ್ದರು.

ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಸಂಪಾದಿಸಿದ್ದೇನೆ: ರೇಣುಕಾಚಾರ್ಯ
ನಮ್ಮ ಮನೆ, ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆಸಿರುವುದರ ಹಿಂದೆ ರಾಜಕೀಯ ಷಡ್ಯಂತ್ರ, ಪಿತೂರಿ ಇದ್ದಿರುವುದಾಗಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮಗೆ ಪಿತ್ರಾರ್ಜಿತ ಆಸ್ತಿಯೂ ಇದೆ. ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಸಂಪಾದಿಸಿದ್ದೇನೆ ಎಂದು ಹೇಳಿದ್ದಾರೆ.
-ಉದಯವಾಣಿ

Write A Comment