ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೇ ಸಾಗಿದ್ದು 14 ವರ್ಷದ ಬಾಲಕಿಯನ್ನು ನಾಲ್ವರು ಕಾಮುಕರು ಚಲಿಸುತ್ತಿರುವ ಅಪಹರಿಸಿ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರವೆಸಗಿದ ಹೇಯ ಘಟನೆಯೊಂದು ನಡೆದಿದೆ.
ಖಾಟೋಲಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು 9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ತನ್ನ ಕಿರಿಯ ಸಹೋದರಿಯೊಂದಿಗೆ ಶಾಲೆಗೆ ತೆರಳುತ್ತಿದ್ದ ಸಮಯದಲ್ಲಿ ಅವರಿಗೆ ಲಿಫ್ಟ್ ನೀಡುವ ನೆಪದಲ್ಲಿ ಕರೆದೊಯ್ದಿದ್ದು ನಂತರ ಸಹೋದರಿಯನ್ನು ಶಾಲೆಗೇ ಬಿಟ್ಟು ಆಕೆಯನ್ನು ಅಪಹರಿಸಿ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ತಮ್ಮ ಕಾಮತೃಷೆ ತೀರಿಸಿಕೊಂಡ ಕಾಮುಕರು ಬಾಲಕಿಯನ್ನು ಲಾವಾಡ್-ಮಸೂರಿ ರಸ್ತೆಯಲ್ಲಿರುವ ಖಾರ್‌ದೌನಿ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ.
ಬಾಲಕಿಯ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನದೀಮ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಇನ್ನುಳಿದ ಮೂವರ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.