ಬಂಟ್ವಾಳ, ಆಗಸ್ಟ್.06 : ಗಲಭೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಮಾಣಿ ಸಮೀಪದ ಬುಡೋಳಿಯಲ್ಲಿ ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬುಡೋಳಿ ಸಮೀಪದ ಮಡಲ ನಿವಾಸಿ ಅನ್ಸಾರ್(22)ಎಂದು ಗುರುತಿಸಲಾಗಿದೆ.
2007ರ ಅ.28ರಂದು ಬುಡೋಳಿ ಪೆರಾಜೆಯಲ್ಲಿ ನಡೆದ ಗಲಭೆಯಲ್ಲಿ ಸುಮಾರು 15 ಮಂದಿಯ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದುದರಿಂದ ವಾರೆಂಟ್ ಜಾರಿಯಾಗಿತ್ತು. ಈ ಪೈಕಿ ಘಟನೆಯ ವೇಳೆ ಬಾಲಕನಾಗಿದ್ದ ಅನ್ಸಾರ್ ತಲೆಮರೆಸಿಕೊಂಡಿದ್ದನು.
ಬುಧವಾರ ಬೆಂಗಳೂರಿನಿಂದ ಊರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬುಡೋಳಿಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.