ನವದೆಹಲಿ: ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ದೇಶದ ಜನರಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ಮತ್ತೆ ಪುನರ್ ಆದೇಶಿಸಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆಧಾರ್ ಕಡ್ಡಾಯವಲ್ಲ ಎಂಬುದನ್ನು ಜಾಹೀರಾತು ನೀಡಿ ಪ್ರಚಾರ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಎಲ್ ಪಿಜಿ ಸಬ್ಸಿಡಿ ಮತ್ತು ಆಹಾರ ಧಾನ್ಯ ಪಡೆದುಕೊಳ್ಳಲು ಮಾತ್ರ ಕಡ್ಡಾಯ. ಉಳಿದಂತೆ ಆಧಾರ್ ಕಾರ್ಡ್ ಎಲ್ಲದಕ್ಕೂ ಕಡ್ಡಾವಲ್ಲ. ಹಾಗಾಗಿ ಆಧಾರ್ ಕಾರ್ಡ್ ಎಲ್ಲದಕ್ಕೂ ಕಡ್ಡಾವಲ್ಲ ಎಂದು ಟಿವಿ ಮತ್ತು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಎಂದು ಪೀಠ ತಿಳಿಸಿದೆ.
ಆಧಾರ್ ಕಡ್ಡಾಯ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ನಾಗರಿಕರ ಮೂಲಭೂತ ಹಕ್ಕುಗಳನ್ನೇ ಕಸಿಯಲು ಹೊರಟಿದೆ. ಎಲ್ಲಾ ಸ್ಕೀಮುಗಳಿಗೆ ಆಧಾರ್ ಕಡ್ಡಾಯ ಎಂಬುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆ ನಡೆಸಿ ಸಂವಿಧಾನ ಪೀಠ ಈ ಆದೇಶ ನೀಡಿದೆ.