ಕನ್ನಡದ ಪ್ರತಿಭಾನ್ವಿತ ನಟಿ ‘ತುಪ್ಪದ ಹುಡುಗಿ’ ರಾಗಿಣಿ ಅವರು ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ.
ಮೈಸೂರಿನ ಇಲವಾಲದಲ್ಲಿ ‘ನಾನೇ ನೆಕ್ಸ್ಟ್ ಸಿಎಂ’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ ಸಾಹಸ ದೃಶ್ಯವೊಂದರಲ್ಲಿ ಪಾಲ್ಗೊಂಡಿದ್ದ ಸಮಯದಲ್ಲಿ ರಾಗಿಣಿ ಅವರ ಹಣೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಗಿಣಿಯವರನ್ನು ತಪಾಸಣೆ ಮಾಡಿದ ವೈದ್ಯರು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದು ಎರಡ್ಮೂರು ದಿನ ವಿಶ್ರಾಂತಿ ಪಡೆದು ರಾಗಿಣಿಯವರು ಮತ್ತೆ ಚಿತ್ರೀಕರಣಕ್ಕೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.