ಕನ್ನಡ ವಾರ್ತೆಗಳು

ಸಿದ್ಧಿ ವಿನಾಯಕ ಪ್ರತಿಷ್ಠಾನ, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ ಅಯ್ಕೆ.

Pinterest LinkedIn Tumblr

Shanth_aram_shetty

ಮಂಗಳೂರು,ಆಗಸ್ಟ್.26 : ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೆಲ್ ಮಂಗಳೂರು ಇದರ 12 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ನೂತನ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಮಾಲಾಡಿ ಅಜಿತ್‌ಕುಮಾರ್ ರೈ ತಿಳಿಸಿದ್ದಾರೆ.

ಉಪಾಧ್ಯಕ್ಷರುಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಪದಾಧಿಕಾರಿಗಳು ಮತ್ತು ಬಂಟರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿಯ ಸದಸ್ಯರು ಗಳನ್ನು ಆಯ್ಕೆ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಯಾಗಿ ಶಶಿರಾಜ್ ಶೆಟ್ಟಿ ಕೊಳಂಬೆ, ಮೀನಾ ಆರ್. ಶೆಟ್ಟಿ, ಪ್ರತಿಮಾ ಆರ್. ಶೆಟ್ಟಿ , ಕೋಶಾಧಿಕಾರಿಯಾಗಿ ಕೃಷ್ಣರಾಜ ಸುಲಾಯ ಜತೆ ಕೋಶಾಧಿಕಾರಿಯಾಗಿ ಶೇಖರ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಮನೀಶ್ ರೈ, ಅಶ್ವತ್ಥಾಮ ಹೆಗ್ಡೆ, ಜಗದೀಶ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ 17ರಿಂದ 19ರ ವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯ ಕ್ರಮ ಗಳೊಂದಿಗೆ ಜರಗಲಿದೆ.

ಆಗಸ್ಟ್ 26 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಎ.ಬಿ. ಶೆಟ್ಟಿ ಸಭಾ ಭವನದಲ್ಲಿ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಾಸಭೆ ಜರಗಲಿದ್ದು ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಕಛೇರಿಯನ್ನು ಉದ್ಘಾಟಿಸಲಾಗುವುದು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯದರ್ಶಿ ದಿವಾಕರ ಸಾಮಾನಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Write A Comment