ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ನವೀಕರಣಗೊಂಡು ಹಾಗೂ ಮಂಗಳೂರು ದಸರಾ ಪ್ರಾರಂಭವಾಗಿ 25 ವರ್ಷ ಸಂದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ನವೀಕರಣ ಮತ್ತು ಮಂಗಳೂರು ದಸರಾ ರೂವಾರಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹಾಗೂ ಮಾಲತಿ ಪೂಜಾರಿ ದಂಪತಿ ಪುತ್ರ ಸಂತೋಷ್ ಪೂಜಾರಿ ದಂಪತಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿ, ತನ್ನ ತಾಯಿ ಹೆಸರಿನಲ್ಲಿ ದೇವರಿಗೆ ಅರ್ಪಿಸಿದ ‘ಗೌರಿ ಮಂಟಪ’ವನ್ನು ಬುಧವಾರ ಸಂಜೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹಾಗೂ ಅವರ ಪತ್ನಿ ಶ್ರೀಮತಿ ಮಲಾತಿ ಜನಾರ್ದನ ಪೂಜಾರಿ ದಂಪತಿಗಳು ಉದ್ಘಾಟಿಸಿದರು.
ಮುಂಬಾಯಿ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ, ಶ್ರೀ ಕ್ಷೇತ್ರದ ಆಡಳಿತಾ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕೋಶಾಧಿಕಾರಿ ಪದ್ಮರಾಜ ಆರ್., ಕ್ಷೇತ್ರ ಅಭಿವೃದ್ಧಿ ಮಂಡಳಿ ಸದಸ್ಯ ಹರಿಕೃಷ್ಣ ಬಂಟ್ವಾಳ, ಡಾ| ಬಿ.ಜಿ. ಸುವರ್ಣ, ಸುನೈನಾ ಪೂಜಾರಿ ಹಾಗೂ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಕುಟುಂಬದ ಇತರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.