ಚೆನ್ನೈ: ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯ ಟೀಂ ಇಂಡಿಯಾಕ್ಕೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
ದಕ್ಷಿಣ ಆಫ್ರಿಕಾ ಬೌಲರ್ ಗಳನ್ನು ದಂಡಿಸಿದ ವಿರಾಟ್ ಕೊಹ್ಲಿ 137 ರನ್ ಸಿಡಿಸಿದ್ದಾರೆ. ಇದು ವಿರಾಟ್ ಅವರ 23ನೇ ಶತಕವಾಗಿದ್ದು, ಸೌರವ್ ಗಂಗೂಲಿಯ 22 ಶತಕದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾದ ಶಿಖರ್ ಧವನ್ ರೋಹಿತ್ ಶರ್ಮಾ ಉತ್ತಮವಾಗಿ ಆಡದಿದ್ದರು. ವಿರಾಟ್ ಕೊಹ್ಲಿ ತಾಳ್ಮೆಯ ಆಟ ತಂಡ ಉತ್ತಮ ರನ್ ಕಲೆಹಾಕಲು ಸಾಧ್ಯವಾಗಿದೆ.
ಭಾರತ ಪರ ರೋಹಿತ್ ಶರ್ಮಾ 21, ಶಿಖರ್ ಧವನ್ 7, ರಹಾನೆ 45, ಸುರೇಶ್ ರೈನಾ 53 ರನ್ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಸ್ಟೇನ್ 2, ರಬಾಡ, ಮೋರಿಸ್ 1 ವಿಕೆಟ್ ಪಡೆದಿದ್ದಾರೆ.