ಕರ್ನಾಟಕ

ಸಿದ್ದರಾಮಯ್ಯ ನಮ್ ಕ್ಯಾಪ್ಟನ್, ಜಿಲ್ಲಾ ಉಸ್ತುವಾರಿ ಬಗ್ಗೆ ಅವರೇ ನಿರ್ಧರಿಸುತ್ತಾರೆ: ಪರಮೇಶ್ವರ

Pinterest LinkedIn Tumblr

KPCC President Dr G Parameshwara during felicitation program on the completion of 5 years as president of KPCC, the program was held at Palace Grounds, in Bengaluru on Friday.Nagaraja Gadekal

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ ಕ್ಯಾಪ್ಟನ್, ತುಮಕೂರು ಜಿಲ್ಲಾ ಉಸ್ತುವಾರಿ ವಹಿಸುವ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಇಂದು ತುಮಕೂರು ಜಿಲ್ಲಾ ಉಸ್ತುವಾರಿಗೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ನಾನು ತುಮಕೂರು ಜಿಲ್ಲಾ ಉಸ್ತುವಾರಿ ಕೇಳಿಲ್ಲ. ಮುಖ್ಯಮಂತ್ರಿಗಳೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ಅಲ್ಲದೆ ಗೃಹ ಖಾತೆಗಾಗಿ ನಾನು ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರ ಎಂದು ಪರಮೇಶ್ವರ ಸ್ಪಷ್ಟಪಡಿಸಿದರು.

ಇದೇ ವೇಳೆ ತಮಗೆ ಗೃಹ ಖಾತೆಯನ್ನು ಬಿಟ್ಟುಕೊಟ್ಟ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಹೇಳಿದ ಪರಮೇಶ್ವರ, ಜಾರ್ಜ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಗೃಹ ಖಾತೆಯಲ್ಲೇ ಅವರನ್ನು ಮುಂದುವರೆಸಿದ್ದರೆ ಚೆನ್ನಾಗಿತ್ತು ಎಂದರು.

ಇನ್ನು ಇಂದು ಬೆಳಗ್ಗೆ ಪೊಲೀಸ್ ಅಧಿಕಾರಿಗಳು ತಮ್ಮನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ವಾಡಿಕೆಯಂತೆ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಸೂಚಿಸಿದ್ದೇನೆ ಎಂದರು.

ನಾನು ಅತಿ ಸರಳ ಹಾಗೂ ಸೌಮ್ಯ ಸ್ವಭಾವದ ವ್ಯಕ್ತಿ. ಹೀಗಾಗಿ ನನ್ನೊಂದಿಗೆ ಕೆಲಸ ಮಾಡುವುದು ಪೊಲೀಸರಿಗೆ ಕಷ್ಟವಾಗಲ್ಲ ಎಂದು ನೂತನ ಗೃಹ ಸಚಿವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಗೃಹ ಖಾತೆ ಎರಡೂ ನನ್ನ ಬಳಿಯೇ ಇದೆ. ಎರಡೂ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಸೂಕ್ತ ಕಾಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿಯವರೆಗೆ ನಾನು ಅಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದರು.

Write A Comment