ಮಂಗಳೂರು,ನ.04 : ನವಂಬರ್ 22ರಿಂದ 26ರ ವರೆಗೆ 10ನೇ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವವು ಮಂಗಳೂರು ಹಾಗೂ ಉಡುಪಿಯಲ್ಲಿ ನಡೆಯಲಿದ್ದು ಇದರ ಉದ್ಘಾಟನಾ ಸಮಾರಂಭವು ಮಂಗಳೂರಿನ ಪಣಂಬೂರು ಬೀಚ್‍ನಲ್ಲಿ ನ. 22ರಂದು ನಡೆಯಲಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು ಎಂದು ದ.ಕ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಂತರಾಷ್ರೀಯ ಮಕ್ಕಳ ಚಲನಚಿತ್ರೋತ್ಸವ ನಡೆಯುವ ಈ ಐದು ದಿನಗಳಲ್ಲಿ 40 ದೇಶಗಳ 200ಕ್ಕಿಂತಲೂ ಅಧಿಕ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು, ಜೊತೆಗೆ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಹಾಗೂ ಪಿಲಿಕುಳ ನಿಸರ್ಗಧಾಮದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಈ ಬಾರಿಯ ಮಕ್ಕಳ ಚಲನ ಚಿತ್ರೋತ್ಸವವನ್ನು ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂರವರ 125ನೇ ಜನ್ಮದಿನಾಚರಣೆಯ ಸ್ಮರಣಾರ್ಥವಾಗ ನಡೆಸಲಾಗುವುದು ಎಂದು ತಿಳಿಸಿದ ಅವರು ಮುಕ್ತಾಯ ಸಮಾರಂಭವನ್ನು ಮಂಗಳೂರಿನ ಪಣಂಬೂರು ಬೀಚ್ ಮತ್ತು ಉಡುಪಿಯ ಮಲ್ಪೆ ಬೀಚ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.