ಕನ್ನಡ ವಾರ್ತೆಗಳು

ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು, ವಾಲಿಬಾಲ್ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Pinterest LinkedIn Tumblr

volley_Ball_winners

ಮಂಗಳೂರು,ಡಿ.14 : ದೊಡ್ಡಬಳ್ಳಾಪುರದ ಕನಸವಾಡಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ವತಿಯಿಂದ ವಾಲಿಬಾಲ್ ತಂಡದ ವಿದ್ಯಾರ್ಥಿ ಸ್ಪರ್ಧಿಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಸಂಚಾಲಕರಾದ ಶ್ರೀ ಕೃಷ್ಣ ಪ್ರಸಾದ್ ರೈ, ಪ್ರಾಂಶುಪಾಲರಾದ ಡಾ. ಕಿಶೋರ್‌ಕುಮಾರ್ ರೈ ಶೇಣಿ, ಉಪ ಪ್ರಾಂಶುಪಾಲರಾದ ಶ್ರೀ ಹರೀಶ್ ಭಟ್, ದೈಹಿಕ ಶಿಕ್ಷಣ ನಿರ್ದೇಶಕ ರಾಜ್‌ಕಿಶೋರ್ ಭಂಡಾರಿ ಉಪಸ್ಥಿತರಿದ್ದರು.

Write A Comment