ಬೆಂಗಳೂರು, ಡಿ.14-ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಮಾಣ ಪತ್ರ ಸಲ್ಲಿಸುವಾಗ ಕೆಲ ಮಾಹಿತಿಗಳನ್ನು ಮುಚ್ಚಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹಾಗೂ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.
ವಿ.ಶಶಿಧರ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ವೀರಪ್ಪ ಮೊಯ್ಲಿ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಚುನಾವಣೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರದಲ್ಲಿ ಅವರ ವಿರುದ್ಧ ದೆಹಲಿ ಎಬಿಸಿಯಲ್ಲಿ ದಾಖಲಾಗಿದ್ದ ಮಾಹಿತಿಯನ್ನು ಮುಚ್ಚಿಡಲಾಗಿದೆ.
ಈ ಬಗ್ಗೆ ಅವರ ವಿರುದ್ಧ ಕ್ರಮಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ಶಶಿಧರ್ ಅವರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ.