ರಾಷ್ಟ್ರೀಯ

ಮಧ್ಯಪ್ರದೇಶ-ಬಿಹಾರದಲ್ಲಿ ಸಂಭವಿಸಿದ ಪ್ರತ್ಯೇಕಅಪಘಾತಗಳಲ್ಲಿ 18 ಜೀವಗಳು ಬಲಿ

Pinterest LinkedIn Tumblr

accident

ಹೊಶಂಗಾಬಾದ್/ಪಾಟ್ನಾ, ಡಿ.15: ಮಧ್ಯಪ್ರದೇಶ ಹಾಗೂ ಬಿಹಾರದಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 18 ಜನ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದು, ಇತರ 22 ಜನ ಗಾಯಗೊಂಡಿರುವ ಘಟನೆಗಳು ನಡೆದಿವೆ. ಗಾಯಾಳುಗಳನ್ನು ಹೊಶಂಗಾಬಾದ್ ಹಾಗೂ ಪಾಟ್ನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಶಂಗಾಬಾದ್ ವರದಿ:
ಮಧ್ಯಪ್ರದೇಶದ ಹೊಶಂಗಾಬಾದ್ ಜಿಲ್ಲೆಯಲ್ಲಿ ಮದುವೆ ದಿಬ್ಬಣದ ಬಸ್ ಒಂದು ಪಲ್ಟಿಯಾಗಿ 15 ಜನ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದವರಲ್ಲಿ ಇತರ 20 ಜನಕ್ಕೆ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಜೋಶುಗಾಬಾದ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಅಂಥವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ವಾಪಾಸಾಗುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಪಟ್ನಾ ವರದಿ:

ರಸ್ತೆಯಲ್ಲಿ ಕರ್ತವ್ಯ ನಿರತರಾಗಿದ್ದ ಐವರು ಪೊಲೀಸ್ ಸಿಬ್ಬಂದಿ ಮೇಲೆ ಲಾರಿಯೊಂದು ಹರಿದು ಮೂವರು ಪೊಲೀಸರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರದ ರೊಹ್ಟಾಸ್‌ನಲ್ಲಿ ಈ ದುರಂತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ಸ್ಪಂದಿಸದಷ್ಟು ರಕ್ತಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಐವರು ಪೊಲೀಸರೂ ಘಟನೆ ಸಂಭವಿಸಿದಾಗ ಕರ್ತವ್ಯದಲ್ಲಿ ನಿರತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಶಾಲಾ ಬಸ್ ಒಂದು ಪಲ್ಟಿಯಾಗಿ 25 ಮಂದಿ ಮಕ್ಕಳು ಗಾಯಗೊಂಡಿದ್ದಾರೆ. ರಸ್ತೆ ತಿರುವೊಂದರಲ್ಲಿ ಈ ಬಸ್ ಪಲ್ಟಿಯಾಗಿದ್ದು, ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

Write A Comment