ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಮನಿಶ್ ಪಾಂಡೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಏಕದಿನ ಸರಣಿಗೆ ಸುರೇಶ್ ರೈನಾ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಏಕದಿನ ಸರಣಿಗೆ ಬಿಸಿಸಿಐ 15 ಆಟಗಾರರನ್ನು ಆಯ್ಕೆ ಮಾಡಿದ್ದು, ನಾಯಕ ಮಹೇಂದ್ರ ಸಿಂಗ್ ಧೋನಿ, ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಮನಿಶ್ ಪಾಂಡೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಗುರುಕೀರತ್ ಹಾಗೂ ರಿಷಿ ಧವನ್ ಸ್ಥಾನ ಪಡೆದಿದ್ದಾರೆ.
ಇದೇ ವೇಳೆ ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ ಟಿ 20 ತಂಡವನ್ನು ಸಹ ಪ್ರಕಟಿಸಿದ್ದು, ಬಹು ದಿನಗಳ ನಂತರ ಯುವರಾಜ್ ಸಿಂಗ್ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ನಾಯಕ ಮಹೇಂದ್ರ ಸಿಂಗ್ ಧೋನಿ, ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಯುವರಾಜ್ ಸಿಂಗ್, ಸುರೇಶ್ ರೈನಾ, ಆರ್ ಅಶ್ವಿನ್, ಮೊಹಮದ್ ಶಮಿ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್ ಹಾಗೂ ಆಶಿಶ್ ನೆಹ್ರಾ ಟಿ20 ತಂಡದಲ್ಲಿದ್ದಾರೆ.
ಜನವರಿ 12ರಿಂದ 31ರವರೆಗೆ ಆಸ್ಟ್ರೇಲಿಯಾ ಜೊತೆ ಐದು ಏಕದಿನ ಸರಣಿ ಹಾಗೂ ಮೂರು ಟಿ20 ಪಂದ್ಯಗಳನ್ನು ಆಯೋಜಿಸಲಾಗಿದೆ.