ಕರ್ನಾಟಕ

ಪ್ರತ್ಯೇಕ ಸಚಿವರ ನೇಮಕ ಅಗತ್ಯವಿಲ್ಲ, ನಾನೇ ಗಡಿ ಕಾಯುವೆ : ಸಿದ್ದರಾಮಯ್ಯ

Pinterest LinkedIn Tumblr

sidduಬೆಳಗಾವಿ, ಡಿ.20- ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರತ್ಯೇಕ ಸಚಿವಾಲಯದ ಅಗತ್ಯವಿಲ್ಲ. ಖುದ್ದು ನಾನೇ ಪರಿಸ್ಥಿತಿ ನಿರ್ವಹಿಸುತ್ತೇನೆ. ಗಡಿ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರವಾಗಿ ಪ್ರತ್ಯೇಕವಾಗಿ ಸಚಿವರನ್ನು ನೇಮಿಸಿದೆ ಎಂದ ಮಾತ್ರಕ್ಕೆ ನಾವು ನೇಮಿಸಬೇಕೆಂದೇ ನಿಲ್ಲ. ಪ್ರತ್ಯೇಕ ಸಚಿವರನ್ನು ನೇಮಕ ಮಾಡಿರುವುದು ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟ ವಿಷಯ ಎಂದರು.  ಬೆಳಗಾವಿ ಗಡಿ ಸಮಸ್ಯೆ ಬಗ್ಗೆ ಖುದ್ದು ನಾನೇ ನಿರ್ವಹಿಸುತ್ತೇನೆ. ಗಡಿ ಸಮಸ್ಯೆಗಳ ಅರಿವಿದೆ.

ಅದಕ್ಕಾಗಿ ಪ್ರತ್ಯೇಕವಾಗಿ ಸಚಿವರನ್ನು ನೇಮಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಗಡಿ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ಮತ್ತು ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲಿನ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸುಪ್ರೀಂ ಕೋರ್‌್ಸನಲ್ಲಿ ಖಾಸಗಿದಾರರಿಂದ ಮೇಲ್ಮನವಿ ದಾಖಲಾಗಿದೆ. ಅದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಅದು ಖಾಸಗಿ ದೂರು, ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂದು  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಯಡಿಯೂರಪ್ಪ ಅವರ ಪ್ರಕರಣವೇ ಬೇರೆ, ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಅವರ ಪ್ರಕರಣವೇ ಬೇರೆ. ಎಲ್ಲಾ ಪ್ರಕರಣಗಳನ್ನು ಒಂದೇ ದೃಷ್ಟಿಕೋನದಿಂದ ನೋಡಲು ಸಾಧ್ಯವಿಲ್ಲ ಎಂದರು.  ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಮಾತುಕತೆ ನಡೆಸಲು ಅವರು ನಿಯೋಗ ಕಳಿಸುವುದಕ್ಕೆ ಹೇಳಿದ್ದಾರೆ. ಸಧ್ಯದಲ್ಲೇ ನಿಯೋಗ ಕಳುಹಿಸಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ ನಡೆಸುತ್ತೇವೆ ಎಂದು ತಿಳಿಸಿದರು.

Write A Comment