ಮುಂಬೈ

ರಾಹುಲ್ ಸಂಸತ್ತಿನಲ್ಲಿ ಹೆಚ್ಚು ಮಾತನಾಡಬೇಕು: ಪೃಥ್ವಿರಾಜ್ ಚವಾಣ್

Pinterest LinkedIn Tumblr

chavanಮುಂಬೈ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹೆಚ್ಚು ಮಾತನಾಡಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ಶನಿವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಆಡಳಿತರೂಢ ಬಿಜೆಪಿ ವಿರುದ್ಧ ತಮ್ಮ ಅಕ್ರಮಣಶೀಲ ಹೋರಾಟವನ್ನು ಮತ್ತಷ್ಟು ಹೆಚ್ಚಿಸಬೇಕು. ಅಲ್ಲದೆ ಜನಸಾಮಾನ್ಯರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸಲು ಅವರು ತಮ್ಮ ಆಂಗಿಕ ಭಾಷೆಯನ್ನು ಸುಧಾರಿಸಿಕೊಳ್ಳಬೇಕು ಎಂದು ಮಹಾ ಮಾಜಿ ಸಿಎಂ ಸಲಹೆ ನೀಡಿದ್ದಾರೆ.

ಈಗ ಸಂಸತ್ತಿನ ಎರಡೂ ಸದನಗಳ ಕಲಾಪ ನೇರ ಪ್ರಸಾರವಾಗುತ್ತದೆ. ಹೀಗಾಗಿ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪರಿಣಾಮಕಾರಿಯಾಗಿ ಹಾಗೂ ಹೆಚ್ಚು ಹೆಚ್ಚು ಮಾತನಾಡಿದರೆ ಅವರ ವಿಶ್ವಾಸಾರ್ಹತೆ ಹೆಚ್ಚಲಿದೆ ಎಂದರು.

ಒಂದು ಸಾಲಿನಲ್ಲಿ ಹೇಳಿದರೆ ಅದು ಅಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಹೀಗಾಗಿ ಅವರು ನಿರಂತರವಾಗಿ ಸುಮಾರು 45 ನಿಮಿಷಗಳಿಂದ 1 ಗಂಟೆಗಳ ಕಾಲ ಮಾತನಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಭಿಪ್ರಾಯಪಟ್ಟಿದ್ದಾರೆ.

Write A Comment