ಅಂತರಾಷ್ಟ್ರೀಯ

ಕಾಬೂಲ್ ವಿಮಾನ ನಿಲ್ದಾಣ ಬಳಿ ಬಾಂಬ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ

Pinterest LinkedIn Tumblr

blast

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸೋಮವಾರ ಬೆಳಗ್ಗೆ ಕಾರ್ ಬಾಂಬ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ.

ಕಾಬೂಲ್‌ನ ಹಮೀದ್ ಕರ್ಜೈ ವಿಮಾನ ನಿಲ್ದಾಣದ ಬಳಿ ಕಾರು ಬಾಂಬ್ ಸ್ಫೋಟ ನಡೆದಿದ್ದು, ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ನಾಲ್ಪರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕಾಬೂಲ್ ನ ವಿಮಾನ ನಿಲ್ದಾಣದ ಬಳಿ ಕಾರು ನಿಲ್ಲಿಸಿ ಈ ಬಾಂಬ್ ಸ್ಫೋಟ ಮಾಡಲಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.

ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆ ಈ ಕೃತ್ಯದ ಹೊಣೆ ಹೊತ್ತಿಲ್ಲ. ಆದರೆ ತಾಲೀಬಾನ್ ನುಸುಳುಕೋರರದ್ದೇ ಈ ಕೃತ್ಯ ಎಂದು ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕಾಬೂಲ್‌ನ ಹೆಚ್ಚುವರಿ ಪೊಲೀಸ್ ವರಿಷ್ಠ ಗುಲ್ ಅಘಾ ರೊಹಾನಿ ಹೇಳಿದ್ದಾರೆ.

Write A Comment