ರಾಷ್ಟ್ರೀಯ

ಬಲರಾಮ್ ಪುರ ಬಳಿ ಭೀಕರ ರಸ್ತೆ ಅಪಘಾತ, 12 ಸಾವು

Pinterest LinkedIn Tumblr

Balarampur

ಬಲರಾಮ್ ಪುರ: ಬಸ್ ಮತ್ತು ಜೀಪ್ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಲರಾಮ್ುರ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿದೇಶಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ತುಳಸಿಪುರದ ದೇವಿ ಪಠಾಣ್ ದೇವಾಲಯಕ್ಕೆ ಭೇಟಿ ನೀಡಿ ಜೀಪ್​ನಲ್ಲಿ ಮರಳುತ್ತಿರುವಾಗ ಘಟನೆ ಸಂಭವಿಸಿದೆ. 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬಸ್​ನಲ್ಲಿರುವ ವಿದೇಶಿಗರಿಗೆ ಏನೂ ಆಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಚಂದ್ರ ಶ್ರೀವಾಸ್ತವ್ ತಿಳಿಸಿದ್ದಾರೆ.

Write A Comment