ಪುಣೆ: ಕಿರುತೆರೆ ಕಲಾವಿದ ಹಾಗೂ ಬಿಜೆಪಿ ಸದಸ್ಯ ಗಜೇಂದ್ರ ಚೌಹಾಣ್ ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಸಂಸ್ಥೆ (ಎಫ್ಟಿಐಐ) ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ತೀವ್ರವಾಗಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸುತ್ತಿವೆ.
ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಲು ಎಫ್ಟಿಟಿಐ ಕಚೇರಿಗೆ ಗಜೇಂದ್ರ ಚೌಹಾಣ್ ಆಗಮಿಸಿದ್ದ ವೇಳೆ ನೂರಾರು ಎಫ್ಟಿಐಐ ವಿದ್ಯಾರ್ಥಿಗಳು ಬೀದಿಗಿಳಿಂದು ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಹತ್ತಿಕ್ಕಲು ಮುಂದಾದಾಗ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಬೇಕಾಯಿತು. ಇದರಿಂದ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದರು.
ಕಳೆದ 7 ತಿಂಗಳ ಹಿಂದೆ ಸರ್ಕಾರದಿಂದ ಎಫ್ಟಿಐಐಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಅವರು ಇಂದು ಅಧಿಕಾರ ಸ್ವೀಕರಿಸಲು ಆಗಮಿಸಿದ್ದರು. ಆ ವೇಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಲಾಠಿ ಪ್ರಹಾರ ನಡೆಸಿದ ಪೊಲೀಸರು, 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಸಹ ನಡೆದಿದೆ.