ರಾಷ್ಟ್ರೀಯ

ಜಯಾ ಅಕ್ರಮ ಆಸ್ತಿ ಪ್ರಕರಣ: ಫೆ.2ರಿಂದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Pinterest LinkedIn Tumblr

jaya-5

ನವದೆಹಲಿ: ಫೆಬ್ರುವರಿ 2ರಿಂದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅಂತಿಮ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಧರಿಸಿದೆ.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ಹಾಗೂ ಇತರರ ವಿರುದ್ಧ ಕರ್ನಾಟಕ ಸರ್ಕಾರ ಹಾಗೂ ಇತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಫೆಬ್ರುವರಿ 2ರಿಂದ ಆರಂಭಿಸಲಾಗುವುದು ಹಾಗೂ ಫೆಬ್ರುವರಿ 3 ಮತ್ತು 4ರಂದು ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಪಿ.ಸಿ.ಘೋಸ್ ಹಾಗೂ ನ್ಯಾಯಮೂರ್ತಿ ಅಮಿತವ ರಾಯ್ ಅವರು ಪೀಠ ಹೇಳಿದೆ.

ಈ ಸಂಬಂಧ ಎರಡೂ ಕಡೆಯವರಿಗೂ ವಿಚಾರಣೆಗೆ ಹಾಜರಾಗುವಂತೆ ಪೀಠ ಸೂಚಿಸಿರುವ ಪೀಠ, ಮುಂದಿನ ಎರಡು ವಾರಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳನ್ನು ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಕರ್ನಾಟಕ ಹೈಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಹಾಗೂ ಡಿಎಂಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.

Write A Comment