ರಾಷ್ಟ್ರೀಯ

ದೇಶದಲ್ಲಿ ಕೇವಲ ಒಬ್ಬ ವ್ಯಕ್ತಿಗೆ ಮಾತ್ರ ‘ಮನ್ ಕಿ ಬಾತ್’ ಬಗ್ಗೆ ಮಾತನಾಡುವ ಹಕ್ಕು ಇದೆ: ಕೇಜ್ರಿವಾಲ್

Pinterest LinkedIn Tumblr

kejriwal-23ನವದೆಹಲಿ: ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿದ್ದ ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಅವರಿಗೆ ಬೆಂಬಲ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರಣ್ ಜೋಹರ್ ಹೇಳಿಕೆ ಬೆಂಬಲಿಸಿ ಟ್ವೀಟ್ ಮಾಡಿರುವ ದೆಹಲಿ ಸಿಎಂ, ದೇಶದಲ್ಲಿ ಕೇವಲ ಒಬ್ಬ ವ್ಯಕ್ತಿ ಮಾತ್ರ ಸಾರ್ವಜನಿಕವಾಗಿ ತಮ್ಮ ಮನಸಿನಲ್ಲಿ ಇರುವುದನ್ನು ಹೇಳಬಹುದು. ಇದನ್ನು ಬೇರೆ ಯಾರೂ ಹೇಳುವಂತಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಬಗ್ಗೆ ನಿನ್ನೆ ಝೀ ಜೈಪುರ್ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ್ದ ಕರಣ್ ಜೋಹರ್, ಇಂದಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ದೊಡ್ಡ ಜೋಕ್ ಆಗಿದೆ ಎಂದಿದ್ದರು. ಅಲ್ಲದೆ ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಿದರೇ ನೀವು ಜೈಲು ಪಾಲಾಗುವ ಸಾಧ್ಯತೆಯೇ ಹೆಚ್ಚು ಎಂದು ಕರಣ್ ಜೋಹರ್ ವ್ಯಂಗ್ಯವಾಗಿಡಿದ್ದಾರೆ.

ನಾವು ನಮ್ಮ ವಯಕ್ತಿಕ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳದಂತ ದೇಶದಲ್ಲಿ ಬದುಕುತ್ತಿರುವುದಕ್ಕೆ ದುಃಖವಾಗುತ್ತಿದೆ ಎಂದು ಕರಣ್ ಜೋಹರ್ ಹೇಳಿದ್ದರು.

Write A Comment