ಪಾಟ್ನಾ: ದೇವಸ್ಥಾನ ತೆರವು ಕಾರ್ಯಾಚರಣೆ ವೇಳೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಘರ್ಷಣೆ, ಹಿಂಸಾಚಾರ ನಡೆದಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ವೈಶಾಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಇದ್ದ ವಾಸುದೇವ ದೇವಸ್ಥಾನ ತೆರವುಗೊಳಿಸುವಂತೆ ಕೆಲ ಸ್ಥಳೀಯ ಹಿಂದೂ ಮತ್ತು ಮುಸ್ಲೀಮರು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೇವಸ್ಥಾನವನ್ನು ತೆರವುಗೊಳಿಸುವಂತೆ ಆದೇಶ ನೀಡಿತ್ತು. ಕೋರ್ಟ್ ಆದೇಶದ ಮೇರೆಗೆ ಪೊಲೀಸರು ದೇವಸ್ಥಾನ ತೆರವಿಗೆ ಮುಂದಾಗಿದ್ದರು. ಆದರೆ, ಇದಕ್ಕೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ.
ದೇವಾಲಯ ತೆರವಿಗೆ ತೆರಳಿದ್ದ ವೇಳೆ ಸ್ಥಳೀಯರ ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿ, ಹಿಂಸಾಚಾರಕ್ಕೆ ತಿರುಗಿದೆ. ಸ್ಥಳೀಯ ಪೊಲೀಸ್ ಠಾಣಾ ಅಧಿಕಾರಿ ಸಂಜಯ್ ಕುಮಾರ್ ಅವರ ಬಂದೂಕು ಕಿತ್ತುಕೊಂಡು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹಿಂಸಾಚರದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.