ಕರ್ನಾಟಕ

ಕಾರವಾರ ಬಿಜೆಪಿ ಕೋಟೆಗೆ ಕಾಂಗ್ರೆಸ್ ಲಗ್ಗೆ

Pinterest LinkedIn Tumblr

congressffಬೆಂಗಳೂರು, ಫೆ. ೨೩ – ಬಿ.ಜೆ.ಪಿ.ಯ ಭದ್ರಕೋಟೆಯಾಗಿರುವ ಕರಾವಳಿ ಭಾಗದಲ್ಲಿ ಬಿ.ಜೆ.ಪಿ. ತನ್ನ ಪ್ರಾಬಲ್ಯ ಮೆರೆದಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಬಿ.ಜೆ.ಪಿ. ಜಿಲ್ಲಾ ಪಂಚಾಯಿತಿ ಅಧಿಕಾರ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಉತ್ತರ ಕನ್ನಡದಲ್ಲಿ ಕಾಂಗ್ರೆಸ್, ಬಿ.ಜೆ.ಪಿಗೆ ಸಡ್ಡು ಹೊಡೆದು ಜಿಲ್ಲಾ ಪಂಚಾಯತ್‌ನಲ್ಲಿ ಭಾರೀ ಗೆಲುವು ಸಾಧಿಸಿ, ಬಹುಮತ ಪಡೆದಿದೆ. ಜೆ.ಡಿ.ಎಸ್. ನೆಲೆ ಕಳೆದುಕೊಂಡಿದೆ.

ಉಡುಪಿ ಜಿಲ್ಲೆಯ ಒಟ್ಟು 26 ಸ್ಥಾನಗಳ ಪೈಕಿ ಬಿ.ಜೆ.ಪಿ. 20 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿ ಜಿಲ್ಲಾ ಪಂಚಾಯತಿಯ ಅಧಿಕಾರ ಹಿಡಿದಿದೆ. ಕಾಂಗ್ರೆಸ್ ಇಲ್ಲಿ 7 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಉಡುಪಿ ತಾಲ್ಲೂಕು ಪಂಚಾಯಿತಿ ಚುನಾವಣೆ ಬಿಜೆಪಿ ಮೇಲುಗೈ ಸಾಧಿಸಿದ್ದು, ಕಾರ್ಕಳ, ಉಡುಪಿ ತಾಲ್ಲೂಕು ಪಂಚಾಯಿತಿ ಬಿಜೆಪಿ ವಶವಾಗಿದೆ. ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ, ಕಾಂಗ್ರೆಸ್ ಸಮಬಲದ ಹೋರಾಟ ನಡೆಸಿವೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಒಟ್ಟು 35 ಸ್ಥಾನದಲ್ಲಿ 20ರಲ್ಲಿ ಬಿಜೆಪಿ ಜಯ ಸಾಧಿಸಿ ಬಹುಮತ ಪಡೆದಿದೆ.

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ 39 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 23 ಸ್ಥಾನ ಗಳಿಸಿ ಅಧಿಕಾರ ಹಿಡಿಯುವುದು ಖಚಿತವಾಗಿದ್ದು, ಬಿಜೆಪಿ 10 ಸ್ಥಾನ ಗಳಿಸಿದೆ.

ಉತ್ತರ ಕನ್ನಡ 10 ತಾಲ್ಲೂಕು ಪಂಚಾಯಿತಿಗಳ ಪೈಕಿ 7 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗೇ ಉಳಿದಿದ್ದು, ಇಲ್ಲಿ ಬಿಜೆಪಿ ಜಿಪಂ ಅಧಿಕಾರ ಹಿಡಿಯುವುದು ನಿಶ್ಚಿತ.

Write A Comment