ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ದಂಪತಿ ನಡುವಿನ ಕಲಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಅಧ್ಯಕ್ಷೆ ಮಂಜುಳಾ ಮಾನಸ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮೈಸೂರಿನಲ್ಲಿ ಮಾತನಾಡಿರುವ ಅವರು, ದರ್ಶನ್ ಪ್ರಕರಣ ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಈಗಾಗಲೇ ಇಬ್ಬರೊಂದಿಗೂ ದೂರವಾಣಿ ಮುಖಾಂತರ ಮಾತನಾಡಲಾಗಿದ್ದು, ಇಬ್ಬರನ್ನು ಕೂರಿಸಿ ಮಾತನಾಡುವ ಅವಶ್ಯಕತೆ ಇದೆ. ಹೀಗಾಗಿ ಇಬ್ಬರಿಗೂ ಮಾತುಕತೆಗೆ ಬರುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಮಾತುಕತೆಗೆ ಸ್ಥಳವನ್ನು ನಿಗದಿ ಮಾಡಲಾಗಿದ್ದು, ಸ್ಥಳವನ್ನು ಗೌಪ್ಯವಾಗಿಡುವಂತೆ ದಂಪತಿಗಳು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳವನ್ನು ಗೌಪ್ಯವಾಗಿರಿ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇದಲ್ಲದೆ, ಇನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾತನಾಡಲು ಇಚ್ಛಿಸಿದ್ದು, ಕೆಲವು ವಿಷಯಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ಬಯಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಅವರೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.