ನವದೆಹಲಿ: ಶಂಕಿತ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ದೆಹಲಿ ಪೊಲೀಸರು ಬುಧವಾರ ಬೆಳಗ್ಗೆ ದಿಢೀರ್ ಕಾರ್ಯಾಚರಣೆ 12 ಮಂದಿ ಶಂಕಿತ ಜೆಇಎಂ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಏಕಕಾಲದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ದಾಳಿ ನಡೆಸಿದ ಪೊಲೀಸರು 12 ಮಂದಿ ಜೈಶ್ ಇ ಮೊಹಮ್ಮದ್ ಸಂಘಟನೆಗೆ ಸೇರಿದ 12 ಮಂದಿ ಶಂಕಿತ ಉಗ್ರರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ನಿನ್ನೆಯಷ್ಟೇ ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಸಂಭಾವ್ಯ ಭಯೋತ್ಪಾದಕ ದಾಳಿಯ ಎಚ್ಚರಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಇಂದು ಕಾರ್ಯಾಚರಣೆಗಿಳಿದ ಪೊಲೀಸರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂಗಿದೆ.
12ಕ್ಕೂ ಹೆಚ್ಚು ಪೊಲೀಸರ ತಂಡಗಳು ಇಂದು ಬೆಳಗಿನ ಜಾವದಲ್ಲೇ ಕಾರ್ಯಾಚರಣೆ ನಡೆಸಿದ್ದು, ದೆಹಲಿಯ ಎನ್ ಸಿಆರ್ ಪ್ರಾಂತ್ಯ ಮತ್ತು ಉತ್ತರ ಪ್ರದೇಶದ ಸಮೀಪವಿರುವ ಡಿಯೋಬಂದ್ ನಲ್ಲಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಪೊಲೀಸರು ಹಲವು ದಾಖಲೆಗಳನ್ನು ಮತ್ತು ಶಂಕಿತ ಉಗ್ರರ ಬಳಿಯಿದ್ದ ಭಾರೀ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.