ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅವರು ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ್ದಾರೆ.
ರೆಡ್ ರೋಡ್‌ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಅವರು ಮಮತಾ ಹಾಗೂ ಅವರ ಸಂಪುಟದ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತೃಣಮೂಲ ಕಾಂಗ್ರೆಸ್ ಮುಖಂಡರು, ಸಿನಿ ತಾರೆಯರು, ಕ್ರೀಡಾಪಟುಗಳು ಸೇರಿದಂತೆ ಹಲವು ಪ್ರಮುಖರು ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು.
Comments are closed.