ರಾಷ್ಟ್ರೀಯ

ಸಚಿವನಾಗಿ ಹೊಸ ಇನಿಂಗ್ಸ್ ಆರಂಭಿಸಿದ ಮಾಜಿ ಕ್ರಿಕೆಟಿಗ ಶುಕ್ಲಾ

Pinterest LinkedIn Tumblr

SHUKLAನವದೆಹಲಿ: ಇತ್ತೀಚಿಗಷ್ಟೇ 18 ವರ್ಷಗಳ ದೇಶೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದ ಬಂಗಾಳದ ಮಾಜಿ ಕ್ರಿಕೆಟಿಗ ಲಕ್ಷ್ಮೀರತನ್ ಶುಕ್ಲಾ ಅವರು ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪುಟದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜಕೀಯದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿ, ಮೊದಲ ಬಾರಿ ಪಶ್ಚಿಮ ಬಂಗಾಳ ವಿಧಾನಸಭೆ ಪ್ರವೇಶಿಸಿದ್ದ ಶುಕ್ಲಾ, ಇಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಚಿವರಾಗಿ ಮಮತಾ ಸಂಪುಟಕ್ಕೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದರು.
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ದೊಡ್ಡ ಹೆಸರು ಮಾಡಲು ವಿಫಲವಾಗಿದ್ದ 35 ವರ್ಷದ ಶುಕ್ಲಾ ಅವರು ಈಗ ರಾಜಕೀಯದಲ್ಲಿ ಮೊದಲ ಯತ್ನದಲ್ಲೇ ಸಚಿವರಾಗುವ ಮೂಲಕ ಹೊಸ ಅಲೆ ಸೃಷ್ಟಿಸಿದ್ದಾರೆ.

Comments are closed.