ಬೆಂಗಳೂರು,ಜೂ.10-ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ಗಳ ಹ್ಯಾಂಡ್‌ಲಾಕ್ ಮುರಿದು ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೀಣ್ಯಾ ಪೊಲೀಸರು ಬಂಧಿಸಿ 13 ಲಕ್ಷ ರೂ. ಬೆಲೆಯ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಗಲಗುಂಟೆಯ ಮಂಜುನಾಥ(19) ಬಂಧಿತ ಆರೋಪಿಯಾಗಿದ್ದು , ಈತನ ಬಂಧನದಿಂದ ಪೀಣ್ಯಾ ಪೊಲೀಸ್ ಠಾಣೆಯ ಮೂರು ಪ್ರಕರಣ, ಸುಬ್ರಹ್ಮಣ್ಯನಗರ ಠಾಣೆಯ ಆರು, ಕಾಮಾಕ್ಷಿಪಾಳ್ಯ ಠಾಣೆಯ ಒಂದು ವಾಹನ ಕಳ್ಳತನ ಪ್ರಕರಣ ಸೇರಿದಂತೆ 14 ಪ್ರಕರಣಗಳು ಪತ್ತೆಯಾಗಿವೆ.
ಆರೋಪಿ ವಿವಿಧ ಬಗೆಯ ಹೊಸ ಹೊಸ ಬೈಕ್‌ಗಳನ್ನು ಓಡಿಸುವ ಹವ್ಯಾಸಕ್ಕೆ ಹಾಗೂ ಐಷರಾಮಿ ಜೀವನದ ದುಂದುವೆಚ್ಚಕ್ಕೆ ಹಣದ ಅವಶ್ಯಕತೆ ಇದುದ್ದರಿಂದ ಈ ಕೃತ್ಯ ಮಾಡುತ್ತಿದ್ದುದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ನಾಗಸಂದ್ರ ಮೆಟ್ರೋ ರ್ವೆ ಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬಜಾಜ್ ಪಲ್ಸರ್ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾಗ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
Comments are closed.