ಕರ್ನಾಟಕ

ವಿಚ್ಛೇದನಕ್ಕೆ ಮುಂದಾಗಿದ್ದ ನಟ ಕಿಚ್ಚ ಸುದೀಪ್-ಪ್ರಿಯಾ ದಂಪತಿ ಮತ್ತೆ ಒಂದಾಗಲಿದ್ದಾರೆ…!

Pinterest LinkedIn Tumblr

sudeep

ಬೆಂಗಳೂರು: ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ನಟ ಸುದೀಪ್ ದಂಪತಿ ಎಲ್ಲಾ ಮರೆತು ಮತ್ತೆ ಒಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲ ದಿನಗಳಲ್ಲಿ ನಡೆದ ಹಲವು ಘಟನೆಗಳು ಇದಕ್ಕೆ ಪುಷ್ಠಿ ನೀಡುತ್ತಿವೆ. ವಿಚ್ಛೇದನಕ್ಕೆಅರ್ಜಿ ಸಲ್ಲಿಸಿರುವ ನಟ ಸುದೀಪ್‌ ಮತ್ತು ಪತ್ನಿ ಪ್ರಿಯಾ ಅವರು ಬುಧವಾರ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು. ಆದರೆ, ಇಬ್ಬರೂ ಗೈರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತು.

ದಂಪತಿಯ ಹೇಳಿಕೆ ದಾಖಲಿಸುವ ಸಂಬಂಧ ನ್ಯಾಯಾಲಯವು ಬುಧವಾರ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ, ಸುದೀಪ್‌ ಪರವಾಗಿ ಅವರ ಸಹೋದರಿ ಹಾಜರಾಗಿ ಚಿತ್ರೀಕರಣದಲ್ಲಿ ತೊಡಗಿರುವುದರಿಂದ ಸುದೀಪ್‌ ಹಾಜರಾಗಲು ಸಾಧ್ಯವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೇ, ಸುದೀಪ್‌ ಮತ್ತು ಪ್ರಿಯಾ ಅವರು ರಾಜಿ ಮಾಡಿಕೊಳ್ಳುವ ಸಾಧ್ಯತೆ ಇದ್ದು, ನ್ಯಾಯಾಲಯವು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತು.

ಸುದೀಪ್ ನಿರ್ಮಾಣದ ಜಿಗರ್ ಥಂಡಾ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸುದೀಪ್ ಮತ್ತು ಪ್ರಿಯಾ ದಂಪತಿ ಕಾಣಿಸಿಕೊಂಡಿದ್ದರು. ಜೊತೆಗೆ ತಮ್ಮ ಮಗಳು ಸಾನ್ವಿ ಹುಟ್ಟುಹಬ್ಬವನ್ನು ಇಬ್ಬರು ಸೇರಿ ಆಚರಿಸಿದ್ದರು.ಹೀಗಾಗಿ ಸುದೀಪ್ ಹಾಗೂ ಪ್ರಿಯಾ ವಿಚ್ಛೇದನಕ್ಕೆ ನಾಂದಿ ಹಾಡಿ ಮತ್ತೆ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನೂ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ವೀಕೆಂಡ್ ವಿತ್ ರಮೇಶ್ ಕಾರ್ಯಕಮರ್ದಲ್ಲಿ ಸುದೀಪ್ ಪತ್ನಿ ಪ್ರಿಯಾ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದು, ಹೇಳಿಕೆ ನೀಡಲು ಇಬ್ಬರು ನ್ಯಾಯಾಲಯಕ್ಕೆ ಹಾಜರಾಗದಿರುವುದು ಮತ್ತೆ ಒಟ್ಟಾಗಿ ಜೀವನ ನಡೆಸಲು ಸುದೀಪ್ ದಂಪತಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

2001 ರಲ್ಲಿ ವಿವಾಹವಾಗಿದ್ದ ಸುದೀಪ್ ಪ್ರಿಯಾ ದಂಪತಿ 2015ರ ಸೆಪ್ಟೆಂಬರ್‌ನಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸುವ ಮೂಲಕ ತಮ್ಮ 14 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ಸುದೀಪ್‌ ದಂಪತಿ ಮುಂದಾಗಿದ್ದರು. ಅದಾದ ನಂತರ ಪ್ರಿಯಾ ಎಲ್ಲಿಯೂ ಇದರ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.

Comments are closed.