ಮಂಗಳೂರು,ಜೂ.04: ಕಲ್ಕೂರ ಪ್ರತಿಷ್ಠಾನ ಮತ್ತು ಕುಟುಂಬ ಮಂಗಳೂರು ಸಹಯೋಗದಲ್ಲಿ ಸಿದ್ಧಾಪುರ ಕಲ್ಲಗದ್ದೆಯ ಶಂಭು ಶಿಷ್ಯ ಯಕ್ಷಗಾನ ಪ್ರತಿಷ್ಠಾನ ಅವರಿಂದ ನಗರದ ಡಾನ್‌ಬಾಸ್ಕೋ ಸಭಾಂಗಣದಲ್ಲಿ ನಡೆದ ಯಕ್ಷ ತ್ರಿಕೂಟ ಸಂಭ್ರಮದ ಸಮಾರೋಪ ಸಮಾರಂಭ ಜರಗಿತು.
ಈ ಸಂದರ್ಭ ಹಿರಿಯ ಭಾಗವತ ನೆಬ್ಬೂರು ನಾರಾಯಣ ಭಾಗವತ ಅವರನ್ನು ಸನ್ಮಾನಿಸಲಾಯಿತು. ವಿನಾಯಕ ಹೆಗಡೆ ಕಲ್ಲಗದ್ದೆ ಅವರಿಗೆ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಹೆಗಡೆ, ಹರಿಕಥಾ ಪರಿಷತ್ ಅಧ್ಯಕ್ಷ ಮಹಾಬಲ ಶೆಟ್ಟಿ, ಪೊಳಲಿ ನಿತ್ಯಾನಂದ ಕಾರಂತ, ತೋನ್ಸೆ ಪುಷ್ಕಳ ಕುಮಾರ್, ಜನಾರ್ದನ ಹಂದೆ ಉಪಸ್ಥಿತರಿದ್ದರು.
ಎಸ್.ಎಂ. ಹೆಗಡೆ ಸ್ವಾಗತಿಸಿದರು. ಮಾಧುರಿ ಶ್ರೀರಾಮ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶ್ರೀಕೃಷ್ಣ ಸಂಧಾನ ಪ್ರಸಂಗ ಪ್ರದರ್ಶನಗೊಂಡಿತು.
Comments are closed.