ಕರ್ನಾಟಕ

ವೃದ್ಧ ದಂಪತಿಗಳ ಬರ್ಬರ ಹತ್ಯೆ

Pinterest LinkedIn Tumblr

murder_jodi_phoot

ಬೆಂಗಳೂರು, ಜು. 05: ಯಲಹಂಕದ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ನಿಯಂತ್ರಣಾಧಿಕಾರಿ ಮುನಿಯಪ್ಪ ಹಾಗೂ ಅವರ ಪತ್ನಿಯನ್ನು ದುಷ್ಕರ್ಮಿಗಳು ಹಲ್ಲೆ ನಡೆಸಿ ಬರ್ಬರವಾಗಿ ಕೊಲೆಗೈದಿರುವ ದುರ್ಘಟನೆ ಬ್ಯಾಟರಾಯನಪುರದ ವಿನಾಯಕನಗರದಲ್ಲಿ ನಡೆದಿದೆ.

ಪತ್ನಿ ವರಲಕ್ಷ್ಮಮ್ಮ (60)ಅವರೊಂದಿಗೆ ನಿವೃತ್ತ ಜೀವನ ಸಾಗಿಸುತ್ತಿದ್ದ ಮುನಿಯಪ್ಪ (68) ಅವರನ್ನು ದುಷ್ಕರ್ಮಿಗಳು ಕಳೆದ ಜು. 3 ರಂದು ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ.

ಮುನಿಯಪ್ಪ ಅವರ ಮನೆಯ ಬಳಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಕೊಡಿಗೆಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದಾಗ ಜೋಡಿಕೊಲೆ ನಡೆದಿರುವುದು ಪತ್ತೆಯಾಗಿದೆ.

ಮನೆಯಲ್ಲಿ ಯಾವುದೇ ವಸ್ತುಗಳನ್ನು ಕಳವು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಯಾವ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ.

ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದು, ಸ್ಥಳಕ್ಕೆ ಧಾವಿಸಿರುವ ಆಗ್ನೇಯ ವಲಯದ ಡಿಸಿಪಿ ಡಾ. ಹರ್ಷ ಅವರು ಪರಿಶೀಲನೆ ನಡೆಸಿದ್ದಾರೆ.

ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.