ಕರ್ನಾಟಕ

ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ : ಸಿಎಂ

Pinterest LinkedIn Tumblr

siddu

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶ ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರು ಯಾರೇ ಇರಲಿ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದರು. ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕೆಲವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಪ್ರಕರಣದ ಸತ್ಯಾಸತ್ಯತೆ ಹೊರಬೇಕೆಂಬ ಕಾರಣಕ್ಕಾಗಿಯೇ ತನಿಖೆಗೆ ಆದೇಶಿಸಲಾಗಿದೆ. ಅವರು ಪ್ರಸ್ತಾಪಿಸಿರುವ ಕೆಲವು ವಿಷಯಗಳಿಗೆ ತನಿಖೆಯಿಂದಲೇ ಉತ್ತರ ಸಿಗಲಿದೆ ಎಂದು ಹೇಳಿದರು. ಡೆತ್‍ನೋಟ್‍ನಲ್ಲಿ ಗಣಪತಿ ಅವರು ಸಚಿವ ಕೆ.ಜೆ.ಜಾರ್ಜ್ ಹೆಸರು ಉಲ್ಲೇಖ ಮಾಡಿರುವುದರಿಂದ ಅವರ ರಾಜೀನಾಮೆ ಪಡೆಯುತ್ತೀರ ಎಂಬ ಮಾಧ್ಯಮದವರ ಪ್ರಶ್ನೆಗೆ ತನಿಖೆ ಮುಗಿಯುವವರೆಗೂ ಯಾರ ಮೇಲೂ ಸಂದೇಹ ಪಡೆಯುವುದು ಅಷ್ಟು ಸಮಂಜಸವಲ್ಲ ಎಂದು ಪ್ರತಿಕ್ರಿಯಿಸಿದರು. ಪ್ರತಿಪಕ್ಷ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸಿದೆ ಎಂಬ ಮತ್ತೊಂದು ಪ್ರಶ್ನೆಗೆ ಯಾವ ನೈತಿಕತೆ ಮೇಲೆ ಸಿಬಿಐ ತನಿಖೆಗೆ ಒತ್ತಾಯಿಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Comments are closed.