ಕರ್ನಾಟಕ

ಸಿಎಂ ಪೊಲೀಸ್ ಅಧಿಕಾರಿಗಳನ್ನು ಮುಗಿಸುವುದಾಗಿ ಓವೈಸಿ ಬಳಿ ಸುಪಾರಿ ಪಡೆದಂತಿದೆ: ಪ್ರತಾಪ್ ಸಿಂಹ್

Pinterest LinkedIn Tumblr

prataphಕೊಡಗು: ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳನ್ನು ಮುಗಿಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಳಿ ಸುಪಾರಿ ಪಡೆದ ಹಾಗೆ ಕಾಣಿಸುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.

ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಮರಿಗೌಡ ಅವರನ್ನು ಇಲ್ಲಿಯವರೆಗೂ ಬಂಧಿಸಿಲ್ಲ. ಟಿಪ್ಪು ಸುಲ್ತಾನ್ ಜಯಂತಿ ಗಲಾಟೆಯಂದು ಸಾವನ್ನಪಿದ್ದ ಕುಟ್ಟಪ್ಪ ಪ್ರಕರಣವನ್ನು ಸಹ ಮುಚ್ಚಿ ಹಾಕಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಒಂದು ವೇಳೆ ಪ್ರಕರಣವನ್ನು ಸಿಬಿಐಗೆ ವಹಿಸದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಮಡಿಕೇರಿಯ ಕುಶಾಲನಗರದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸುವುದಾಗಿ ಸಂಸದ ಪ್ರತಾಪ ಸಿಂಹ ರಾಜ್ಯ ಸರಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

Comments are closed.