ಮೈಸೂರು: ಕುಮಾರಸ್ವಾಮಿಯದ್ದು ಯಾವಾಗ್ಲೂ ಹಿಟ್ ಆ್ಯಂಡ್ ರನ್ ರಾಜಕಾರಣ ಎಂದು ಮ್ಯುಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಅವರ ಹೈಕಮಾಂಡ್ಗೆ ಕಪ್ಪಕಾಣಿಕೆ ಸಲ್ಲಿಸುತ್ತಿದ್ದಾರೆ ಎಂಬ ಆರೋಪಕ್ಕೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕುಮಾರಸ್ವಾಮಿ ಅವರು ಆಧಾರ ರಹಿತ,ಸುಳ್ಳು ಆರೋಪ ಮಾಡಿದ್ದಾರೆ ಅವರು ಯಾವಾಗಲೂ ಹಿಟ್ ಆ್ಯಂಡ್ ರನ್ ರಾಜಕಾರಣಿ ಎಂದರು.
ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಲ್ಲಿರುವುದು ಸೂಟ್ಕೇಸ್ ಸರಕಾರ. ಸಿದ್ದರಾಮಯ್ಯ ಹಾಗೂ ಜಾರ್ಜ್ ವಿಶೇಷ ವಿಮಾನದಲ್ಲಿ ಆಗಾಗ್ಗೆ ದಿಲ್ಲಿಗೆ ತೆರಳಿ ಕಪ್ಪ ಕಾಣಿಕೆ ಸಲ್ಲಿಸುತ್ತಾರೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದ್ದರು.
-ಉದಯವಾಣಿ
Comments are closed.