ಮುಜಾಫರ್ ನಗರ: 8 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರ ಮಾಡಿ ನಂತರ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಿದ್ವಾಯ್ ನಗರದಲ್ಲಿ ಜುಲೈ 15 ರಂದು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ನಂತರ ಆಕೆ ಮೇಲೆ ಕಲ್ಲು ಎತ್ತಿ ಹಾಕಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಬಾಲಕಿಯ ಕಿರುಚಾಟ ಮತ್ತು ಕಲ್ಲು ಬಿದ್ದ ಶಬ್ಧ ಕೇಳಿದ ಕೂಡಲೇ ಘಟನಾ ಸ್ಥಳಕ್ಕೆ ಬಂದಿರುವ ಸ್ಥಳೀಯರು ಆತನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.
ರಕ್ತದ ಮಡುವಿನಲ್ಲಿ ಸಾವು-ಬದುಕಿನ ಹೋರಾಟದಲ್ಲಿದ್ದ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಉತ್ತರ ಪ್ರದೇಶದಲ್ಲಿ ಈ ಘಟನೆ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದು, ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರ ವಿರುದ್ಧವೇ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೂಡ ನಡೆದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯ ಹಿರಿಯ ಪೊಲೀಸರು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಅಲ್ಲದೆ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
Comments are closed.