ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಬಿಜೆಪಿಯ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಿಂದ ಆರಂಭಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇನ್ನು ಮುಂದೆ ಕನ್ನಡದಲ್ಲೇ ಸುದ್ದಿಗೋಷ್ಠಿ ನಡೆಸುವುದಾಗಿ ಕರ್ನಾಟಕದಿಂದ ನಾಮಪತ್ರ ಸಲ್ಲಿಸುವ ವೇಳೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದರು. ಅದರಂತೆ ಇಂದು ರಾಜ್ಯಸಭಾ ಸದಸ್ಯರಾಗಿ ನಿರ್ಮಲಾ ಸೀತಾರಾಮನ್ ಅವರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸತತ ಮೂರು ಅವಧಿಗೆ ಹೊರರಾಜ್ಯದವರಾದ ವೆಂಕಯ್ಯನಾಯ್ಡು ಅವರನ್ನು ಬಿಜೆಪಿ ಕರ್ನಾಟಕದ ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು. ಆದರೆ ನಾಯ್ಡು ಅವರು ಕನ್ನಡಿಗರಲ್ಲ, ಅವರು 18 ವರ್ಷ ಕರ್ನಾಟಕದ ರಾಜ್ಯಸಭಾ ಸದಸ್ಯರಾಗಿ ಏನು ಮಾಡಿದ್ದಾರೆ ಎಂಬುದು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಫೇಸ್ ಬುಕ್, ಟ್ವೀಟರ್ ನಲ್ಲೂ ವೆಂಕಯ್ಯ ಸಾಕಯ್ಯ ಎಂಬ ಅಭಿಯಾನ ಕೂಡ ನಡೆದಿತ್ತು. ಈ ಬೆಳವಣಿಗೆಯಲ್ಲಿ ವೆಂಕಯ್ಯ ಅವರನ್ನು ಕೈಬಿಟ್ಟಿದ್ದ ಬಿಜೆಪಿ, ತಮಿಳುನಾಡಿನ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು.
-ಉದಯವಾಣಿ
Comments are closed.