ಬೆಂಗಳೂರು: ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡು ಬೇಕು ಎಂದು ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕಾತಿಯನ್ನು ಆರು ತಿಂಗಳುಗಳ ಕಾಲ ಮುಂದೂಡಲಾಗಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡು ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧ್ಯಕ್ಷರ ನೇಮಕಾತಿಯನ್ನು ಆರು ತಿಂಗಳು ಮುಂದೂಡಿದೆ.
ಸದ್ಯ ಇಂಧನ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನು ನೀಡಲು ಸಾಧ್ಯವಿಲ್ಲ. ಯಾವುದಾದರು ಒಂದು ಸ್ಥಾನ ಮಾತ್ರ ಬೇಕಾದರೆ ಕೇಳಿ. ಸದ್ಯದಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕಾತಿ ಮಾಡುತ್ತೇವೆ. ಇಲ್ಲವಾದಲ್ಲಿ 6 ತಿಂಗಳ ನಂತರ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಅಲ್ಲಿಯವರೆಗೂ ಡಾ.ಜಿ.ಪರಮೇಶ್ವರ್ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ ಎಂದು ಹೈಕಮಾಂಡ್ ಸೂಚನೆ ನೀಡಿದೆ.
Comments are closed.