ಕರ್ನಾಟಕ

ಪ್ರವೀಣ್‍ ಖಾಂಡ್ಯನನ್ನು ಬಂಧಿಸಿದರೆ ಬಿಜೆಪಿ ನಿಜ ಬಣ್ಣ ಬಯಲಾಗುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Pinterest LinkedIn Tumblr

cm

ಮೈಸೂರು: ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಸಿ.ಟಿ.ರವಿ ಅವರ ಆಪ್ತ ಪ್ರವೀಣ್‍ಖಾಂಡ್ಯನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಬಿಜೆಪಿಯವರ ನಿಜ ಬಣ್ಣ ಬಯಲಾಗುತ್ತದೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್‍ಖಾಂಡ್ಯ ಶಾಸಕ ಸಿ.ಟಿ.ರವಿ ಅವರಿಗೆ ಬಹಳ ಬೇಕಾದವನು. ಅವನನ್ನು ಹಿಡಿದು ವಿಚಾರಣೆ ನಡೆಸಿದರೆ ಬಿಜೆಪಿಯವರು ಏನೆಂಬುದು ಗೊತ್ತಾಗುತ್ತದೆ ಎಂದರು.

ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಸಿ.ಟಿ.ರವಿ ಅವರ ಪಾತ್ರ ಇದೆಯೇ ಎಂಬ ವರದಿಗಾರರ ಪ್ರಶ್ನೆಗೆ ಮೊದಲು ಖಾಂಡ್ಯನ ವಿಚಾರಣೆ ನಡೆದರೆ ಸತ್ಯ ಹೊರಬರುತ್ತದೆ. ಬಿಜೆಪಿಯವರ ಬಣ್ಣ ಗೊತ್ತಾಗುತ್ತದೆ ಎಂದು ಹೇಳಿದರು.

ನನ್ನ ಪಾತ್ರವಿಲ್ಲ :
ಮರಿಗೌಡ ನಾಪತ್ತೆಯಾಗಿರುವುದರಲ್ಲಿ ನನ್ನ ಪಾತ್ರವಿಲ್ಲ. ಕಾನೂನು ಎಲ್ಲರಿಗೂ ಒಂದೇ. ಹಾಗಾಗಿ ಪೊಲೀಸರು ಕಾನೂನು ರೀತಿ ಯಾವುದೇ ಕ್ರಮಕೈಗೊಳ್ಳಲಿ. ಇದರಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜಿಲ್ಲಾಧಿಕಾರಿ ಶಿಖಾ ಅವರನ್ನು ವರ್ಗಾವಣೆ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಒಂದು ಜಿಲ್ಲೆಗೆ ಜಿಲ್ಲಾಧಿಕಾರಿ ಬಂದ ಮೇಲೆ 3 ವರ್ಷ ಕೆಲಸ ನಿರ್ವಹಿಸುತ್ತಾರೆ. ಶಿಖಾ ಮೈಸೂರಿಗೆ ಬಂದು ಮೂರು ವರ್ಷ ಸಮೀಪಿಸುತ್ತಿದೆ. ಆಡಳಿತಾತ್ಮಕ ನಿರ್ಧಾರವಾಗಿರುವುದರಿಂದ ಅವರು ಸಹಜವಾಗಿ 3 ವರ್ಷವಾದ ನಂತರ ವರ್ಗಾವಣೆಯಾಗುತ್ತಾರೆ ಎಂದು ಹೇಳಿದರು. ಇದೇ ವೇಳೆ ನಿವಾಸದ ಬಳಿ ಆಗಮಿಸಿದ್ದ ನೂರಾರು ಮಂದಿಯಿಂದ ಸಿದ್ದರಾಮಯ್ಯ ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸಲು ಆಶ್ವಾಸನೆ ನೀಡಿದರು. ಕೆಲವರಿಗೆ ಧೈರ್ಯ ತುಂಬಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

Comments are closed.