ಮಂಗಳೂರು,ಜು.26: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ದ.ಕ. ಜಿಲ್ಲಾ ನಿವೃತ್ತ ಸೈನಿಕರ ಸಂಘದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಮಂಗಳೂರು, ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್ ವತಿಯಿಂದ ಮಂಗಳವಾರ ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ‘ದೇಶಪ್ರೇಮ ಮತ್ತು ರಾಷ್ಟ್ರೀಯ ಹೆಮ್ಮೆ’ ಎಂಬ ವಿಷಯದ ಬಗ್ಗೆ ಅಂತರ್ ಶಾಲಾ ಕಾರ್ಯಾಗಾರ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಭೂಷಣ್ ಗುಲಾಬ್ ರಾವ್ ಬೊರಸೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.ಸೈನ್ಯಕ್ಕೆ ಸೇರ್ಪಡೆಗೊಂಡು ಆ ಮೂಲಕ ಸೇವೆ ಮಾಡುವುದು ದೇಶ ಸೇವೆಯ ಒಂದು ಉತ್ಕೃಷ್ಟ ಮಾದರಿಯಾಗಿದ್ದರೆ, ತಾನು ದುಡಿಯುವ ಯಾವುದೇ ಕ್ಷೇತ್ರದಲ್ಲಿಯೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದು ಕೂಡಾ ದೇಶ ಸೇವೆಯೇ ಎಂದು ಅವರು ಹೇಳಿದರು.
ಲಯನ್ಸ್ ಜಿಲ್ಲಾ ಗವರ್ನರ್ ಅರುಣ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ನಿವೃತ್ತ ಸೈನಿಕರ ಸಂಘ ನಿಕಟಪೂರ್ವ ಅಧ್ಯಕ್ಷ ಕರ್ನಲ್ ಎನ್.ಎಸ್. ಭಂಡಾರಿ ಅವರು ಮಾತನಾಡಿ, ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗದವರು ನಮ್ಮ ದೇಶ, ಭೂಮಿಯನ್ನು ಪ್ರೀತಿಸುವ ಮೂಲಕ ಹಾಗೂ ನಮ್ಮ ನೆಲ, ಜಲ, ಪ್ರಾಕೃತಿಕ ಸಂಪನ್ಮೂಲ ರಕ್ಷಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಶ್ರೀಕಾಂತ್ ಶೆಟ್ಟಿ, ವಸಂತ್ ಕಾಯರ್ಮಾರ್, ಜೋಕಿಮ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.
ದ.ಕ. ಜಿಲ್ಲಾ ನಿವೃತ್ತ ಸೈನಿಕರ ಸಂಘ ಅಧ್ಯಕ್ಷ ವಿಕ್ರಮ್ ದತ್ತಾ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಐರನ್, ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಉಮೇಶ್ ಪ್ರಭು, ಅರವಿಂದ ಶೆಣೈ, ಸತೀಶ್ ಪೈ, ಪ್ರತಿಭಾ, ಅನಿಮಾ ಶೆಟ್ಟಿ ಉಪಸ್ಥಿತರಿದ್ದರು.ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್ ಕಾರ್ಯನಿರ್ವಾಹಕ ನಿರ್ದೇಶಕಿ ಸಚಿತಾ ನಂದಗೋಪಾಲ್ ಸ್ವಾಗತಿಸಿದರು.
Comments are closed.