ರಾಷ್ಟ್ರೀಯ

ವಿಜಯ್ ರೂಪಾನಿ ಗುಜರಾತ್ ಮುಖ್ಯಮಂತ್ರಿ

Pinterest LinkedIn Tumblr

vijay-rupaniಅಹಮದಾಬಾದ್ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ವಿಜಯ್ ರೂಪಾನಿ ಅವರನ್ನು ಆಯ್ಕೆ ಮಾಡಲಾಗಿದೆ.

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಬಿಜೆಪಿ ಶಾಸಕರು ಮತ್ತು ಪದಾಧಿಕಾರಿಗಳ ಸಭೆ ಪಕ್ಷದ ಸಭೆ ನಡೆದಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರೂಪಾನಿ ಹೆಸರನ್ನು ಘೋಷಿಸಿದ್ದಾರೆ.

ಗುಜರಾತ್ ಆರೋಗ್ಯ ಸಚಿವರಾಗಿರುವ ನಿತಿನ್ ಪಟೇಲ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.

ಪ್ರಮಾಣವಚನ ಸ್ವೀಕಾರ ಸಮಾರಂಭ ಭಾನುವಾರ ನಡೆಯಲಿದೆ.

Comments are closed.