ಕೋಲಾರ: ಉಗ್ರರ ಗುಂಡಿನ ದಾಳಿಗೆ ಬಲಿಯಾದ ಯೋಧ ರಾಜೇಶ್‍ನ ಪಾರ್ಥೀವ ಶರೀರವನ್ನು ಮುಂಜಾನೆ 3 ಗಂಟೆ ಸುಮಾರಿಗೆ ಹುಟ್ಟೂರಾದ ತಾಲ್ಲೂಕಿನ ಕಿತ್ತಂಡೂರು ಗ್ರಾಮಕ್ಕೆ ತರಲಾಗಿದ್ದು, ಕುಟುಂಬದವರು, ಬಂಧುಮಿತ್ರರ ಆಕ್ರಂದನದ ನಡುವೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಗ್ರಾಮದಲ್ಲಿ ನೀರವಮೌನ ಆವರಿಸಿದ್ದು , ಸಾರ್ವಜನಿಕರು, ಶಾಲಾ ಮಕ್ಕಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಯೋಧನನಿಗೆ ಅಂತಿಮ ನಮನ ಸಲ್ಲಿಸಿದರು. ಇದರ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
ಉಸ್ತುವಾರಿ ಸಚಿವ ರಮೇಶ್ ಕುಮಾರ್, ಶಾಸಕ ವರ್ತೂರು ಪ್ರಕಾಶ್, ಮಾಜಿ ಸಚಿವ ಶ್ರೀನಿವಾಸ್‍ಗೌಡ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಲಹಳ್ಳಿ ಗೋವಿಂದಗೌಡ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಯೋಧನಿಗೆ ಸರ್ಕಾರಿ ಗೌರವಗಳೊಂದಿಗೆ ಮೂರು ಸುತ್ತು ಗುಂಡು ಹಾರಿಸಿ ನಮನ ಸಲ್ಲಿಸಲಾಯಿತು.
Comments are closed.