ಮಂಗಳೂರು, ಆ. 10: ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೋ ಬ್ರಿಗೇಡ್‌ನ ಸಂಸ್ಥಾಪಕ ನರೇಶ್ ಶೆಣೈಗೆ ನ್ಯಾಯಾಲಯವು ಜಾಮೀನು ನೀಡಲು ಮತ್ತೆ ನಿರಾಕರಿಸಿದೆ.ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಂಗ ಬಂಧನದಲ್ಲಿರುವ ನಮೋ ಬ್ರಿಗೇಡ್‌ನ ಸಂಸ್ಥಾಪಕ ನರೇಶ್ ಶೆಣೈ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮಂಗಳವಾರ ನಡೆದಿದ್ದು, ಈ ಸಂದರ್ಭ ಇಲ್ಲಿನ ಎರಡನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.
ವಿನಾಯಕ ಬಾಳಿಗಾರವರು ಕೊಲೆಯಾದ ಬಳಿಕ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ನರೇಶ್ ಶೆಣೈಯನ್ನು ಕೊನೆಗೂ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತಲೆಮರೆಸಿಕೊಂಡಿದ್ದ ಸಂದರ್ಭದಲ್ಲಿ ಜಿಲ್ಲಾ ಮತ್ತು ಹೈಕೋರ್ಟ್ನಲ್ಲಿ ಜಾಮೀನು ಪಡೆಯಲು ವಿಫಲವಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 7 ಮಂದಿಯ ಪೈಕಿ ಮಂಜು ನಿರೇಶ್ವಾಲ್ಯ ಹಾಗೂ ಶೈಲೇಶ್‌ಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿತ್ತು. ಈ ಪೈಕಿ ಶೈಲೇಶ್‌ಗೆ ಜಾಮೀನು ನೀಡಿರುವ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ತನಿಖಾಧಿಕಾರಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೇ ಬಂಧಿತ ಶಿವ ಹಾಗೂ ಶ್ರೀಕಾಂತ್ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು ಅರ್ಜಿಯ ವಿಚಾರಣೆ ಇನ್ನಷ್ಟೇ ನಡೆಸಬೇಕು.
Comments are closed.