ನವದೆಹಲಿ(ಪಿಟಿಐ): 70ನೇ ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯಾಲಯದಲ್ಲಿ ಸೋನಿಯಾ ಗಾಂಧಿ ಅವರ ಬದಲಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಧ್ವಜಾರೋಹಣ ನೇರವೇರಿಸಲಿದ್ದಾರೆ.
ಆಗಸ್ಟ್ 2ರಂದು ವಾರಾಣಸಿಯಲ್ಲಿ ನಡೆದ ರೋಡ್ ಷೋ ವೇಳೆ ಸೋನಿಯಾ ಅಸ್ವಸ್ಥರಾಗಿದ್ದರು. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೀಗಾಗಿ, ಸೋನಿಯಾ ಗಾಂಧಿ ಅವರ ಬದಲಿಗೆ ರಾಹುಲ್ ಗಾಂಧಿ ಅವರು ಪಕ್ಷದ ಉಪಾಧ್ಯಕ್ಷರಾದ ಮೂರು ವರ್ಷದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.
Comments are closed.