ಮಂಗಳೂರು, ಆ.14 : ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಂಗಳೂರು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’ ಅಂಗವಾಗಿ ಶನಿವಾರ ಸಂಜೆ ಮಂಗಳೂರು ಶರವು ಶ್ರೀ ಮಹಾಗಣಪತಿ ದೇವಸ್ಥಾನದಿಂದ ನೆಹರೂ ಮೈದಾನ ತನಕ ಪಂಜಿನ ಮೆರವಣಿಗೆ ನಡೆಯಿತು.
ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ದಿಕ್ಸೂಚಿ ಭಾಷಣ ಮಾಡಿದರು. ವಿಹಿಂಪ ಪ್ರಾಂತ ಸಂಚಾಲಕ ಪ್ರೊ. ಎಂಬಿ ಪುರಾಣಿಕ್, ಪ್ರಾಂತ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿತೇಂದ್ರ ಕೊಟ್ಟಾರಿ, ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್, ಕಾರ್ಯಕ್ರಮದ ಅಧ್ಯಕ್ಷ ಮಧುಕರ್ ಅಮೀನ್, ಬಜರಂಗದಳ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.
Comments are closed.